Sat,Apr27,2024
ಕನ್ನಡ / English

ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಸರ್ಕಾರಕಲ್ಲ ನೆನಪಿರಲಿ: ಎಚ್ ಡಿಕೆ | Janata news

19 Jul 2020
1029

ಬೆಂಗಳೂರು : ಕೋವಿಡ್​-19 ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಈ ರೀತಿ ಫಲಕ ಹಾಕುವ ಕಾರಣ ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದಿದ್ದಾರೆ.

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗಮನ ಹರಿಸಲಿ ಎಂದು ಆಗ್ರಹಿಸಿದರು‌.

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಲೈಸನ್ಸ್ ರದ್ದು ಮಾಡುವ ಸರ್ಕಾರದ ನಿರ್ಧಾರವನ್ನು ಖಂಡಿಸಿದ ಎಚ್ ಡಿಕೆ, ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ.

ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು ಎಂಸಿಐಗೆ, ಸರ್ಕಾರಕಲ್ಲ ನೆನಪಿರಲಿ. ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌ ಎಂದರು.

English summary :HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...