ಬೈಕ್ ಡಿಕ್ಕಿ: ಎಎಸ್ಐ ಬೈಕ್ ಅಪಘಾತದಲ್ಲಿ ಸಾವು! | Janata news
ಕೋಲಾರ: : ಬೈಕ್ಗಳ ನಡುವೆ ಅಪಘಾತ ಕರ್ತವ್ಯದಲ್ಲಿದ್ದ ಎಎಸ್ಐ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಕರ್ತವ್ಯದ ಮೇಲೆ ತೆರಳುವ ವೇಳೆ ಎದುರಿಗೆ ಬಂದ ಬೈಕ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ (52) ಮೃತರು.
ಬುಧವಾರ ರಾತ್ರಿ ಕೋಲಾರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
English summary :Accident in Kolar