Sat,May18,2024
ಕನ್ನಡ / English

11 ತಿಂಗಳ ಬಳಿಕ ಪದಾಧಿಕಾರಿಗಳ ನೇಮಕ: ಬಿಎಸ್‌ವೈ ಪುತ್ರ ವಿಜಯೇಂದ್ರಗೆ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಪಟ್ಟ! | Janata news

01 Aug 2020
803

ಬೆಂಗಳೂರು : ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ ಭಾರತೀಯ ಜನತಾ ಪಕ್ಷದಲ್ಲಿ ಮಹತ್ವದ ಬದಲಾವಣೆಗಳ ಚರ್ಚೆ ಶುರುವಾಗಿದೆ.

ಇದರ ನಡುವೆಯೇ ರಾಜ್ಯ ಬಿಜೆಪಿ ಘಟಕದ ಪುನರ್ ರಚನೆ ಮಾಡಲಾಗಿದ್ದು, ನಳೀನ್ ಕುಮಾರ್ ಕಟೀಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ.

ಸಂಸದೆ ಶೋಭಾ ಕರಂದ್ಲಾಜೆ, ತೇಜಸ್ವಿನಿ ಅನಂತಕುಮಾರ್‌, ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಿಎಂ ಪುತ್ರ ಬಿ.ವೈ.ವಿಜಯೇಂದ್ರ, ಮೈಸೂರು, ಕೊಡಗು ಸಂಸದ ಪ್ರತಾಪ್‌ ಸಿಂಹ, ಮೇಲ್ಮನೆ ಸದಸ್ಯ ಎನ್‌.ರವಿಕುಮಾರ್‌ ಈ ಪಟ್ಟಿಯಲ್ಲಿಸ್ಥಾನ ಪಡೆದಿದ್ದಾರೆ.

10 ಉಪಾಧ್ಯಕ್ಷರನ್ನು ನೇಮಿಸಲಾಗಿದೆ. ಅವರಲ್ಲಿ ಅರವಿಂದ ಲಿಂಬಾವಳಿ ಹಾಗೂ ಶೋಭಾ ಕರಂದ್ಲಾಜೆ ಈ ಮೊದಲು ಪ್ರಧಾನ ಕಾರ್ಯದರ್ಶಿಗಳಾಗಿದ್ದರು.

ತೇಜಸ್ವಿನಿ ಅನಂತಕುಮಾರ್‌ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ.
ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿಎಂ ಪುತ್ರ ವಿಜಯೇಂದ್ರ ಇದೀಗ ಉಪಾಧ್ಯಕ್ಷರಾಗಿ ಬಡ್ತಿ ಹೊಂದಿದ್ದಾರೆ.
ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಸಂಸದ ಪ್ರತಾಪ ಸಿಂಹ್‌ ಅವರಿಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.
ಮಾಲೀಕಯ್ಯ ಗುತ್ತೇದಾರ್‌ ಅವರನ್ನೂ ಉಪಾಧ್ಯಕ್ಷರಾಗಿ ನಿಯೋಜಿಸಲಾಗಿದೆ.
ಪ್ರಧಾನ ಕಾರ್ಯದರ್ಶಿಯಾಗಿ ಎನ್‌.ರವಿಕುಮಾರ್‌ 2ನೇ ಅವಧಿಗೆ ಮುಂದುವರಿದಿದ್ದಾರೆ.

ಮಾಜಿ ಎಂಎಲ್ಸಿಗಳಾದ ಅಶ್ವತ್ಥನಾರಾಯಣ, ಸಿದ್ದರಾಜು ಹೊಸದಾಗಿ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.
ಸಿ.ಟಿ.ರವಿ ಸಂಪುಟ ಸೇರ್ಪಡೆ ಬಳಿಕ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಹೇಶ ಟೆಂಗಿನಕಾಯಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ವೈ ವಿಜಯೇಂದ್ರ, ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಇದೀಗ ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷ ಸ್ಥಾನದ ಮಹತ್ವದ ಜವಾಬ್ದಾರಿಯನ್ನು ನನ್ನ ಹೆಗಲಿಗೆ ಹೊರಿಸಲಾಗಿದೆ. ಇದಕ್ಕಾಗಿ ಪಕ್ಷದ ವರಿಷ್ಠ ಮಂಡಳಿಗೆ ನಾನೆಂದೂ ಆಭಾರಿ. ಹಿರಿಯರ ಮಾರ್ಗದರ್ಶನ, ಕಾರ್ಯಕರ್ತರ ಸಹಕಾರ, ಜನರ ಆಶೀರ್ವಾದ ಮಾತ್ರ ನನ್ನ ಮುಂದಿನ ಹೆಜ್ಜೆಗಳಿಗೆ ಯಶಸ್ಸಿನ ಮೆಟ್ಟಿಲಾಗಬಲ್ಲದು ಎಂದು ಬರೆದುಕೊಂಡಿದ್ದಾರೆ.

English summary :Karnataka Bjp Vice President, Secretary List Released

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...