Sun,May12,2024
ಕನ್ನಡ / English

ಈ ಹಿಂದೆ ಅಧಿಕಾರಿಗಳ ಸಾವಿನ ತನಿಖೆಗೆ ಜಾಗಟೆ ಬಾರಿಸಿದ್ದ ಬಿಜೆಪಿ, ಪಿಎಸ್‌ಐ ಆತ್ಮಹತ್ಯೆ ವಿಷಯದಲ್ಲಿ ಮೌನವಾಗಿದೆ : ಹೆಚ್‌ಡಿಕೆ | Janata news

01 Aug 2020
753

ಬೆಂಗಳೂರು : ಎರಡು ಪ್ರತ್ಯೇಕ ಕೊಲೆ ಪ್ರಕರಣದ ಆರೋಪಿಗಳಿಗಾಗಿ ಹುಡುಕಾಟಕ್ಕಾಗಿ ನಡೆಸುತ್ತಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಿಎಸ್ಐ ಕಿರಣ್‌ ಕುಮಾರ್ ಆತ್ಮಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ.

ಕಿರಣ್‌ ಕುಮಾರ್ ಆತ್ಮಹತ್ಯೆಗೆ ರಾಜಕೀಯ ಒತ್ತಡವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆಯೇ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ತಕ್ಷಣವೇ ಆದೇಶಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಬಿಜೆಪಿಯ ವಿರುದ್ಧವೂ ಕಿಡಿಕಾರಿದ್ದು, ಈ ಹಿಂದೆ ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯಾದ್ಯಂತ ಜಾಗಟೆ ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ.

ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿಎಸ್‍ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐಎಫ್‍ಎಸ್ ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದಿದ್ದಾರೆ.

English summary :HD Kumaraswamy

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...