Mon,May20,2024
ಕನ್ನಡ / English

ಆನ್‍ಲೈನ್ ಮದ್ಯ ಮಾರಾಟ ಕೈಬಿಡಿ, ಶಿಕ್ಷಕರ ಕಷ್ಟವನ್ನ ಕೇಳಿ: ಸರ್ಕಾರಕ್ಕೆ ಕುಮಾರಸ್ವಾಮಿ ಮನವಿ | Janata news

08 Aug 2020
1049

ಬೆಂಗಳೂರು : ಆನ್‍ಲೈನ್‍ನಲ್ಲಿ ಮದ್ಯ ಮಾರಾಟದಂತಹ ಮನೆಹಾಳು ಚಿಂತನೆಯನ್ನು ಕೈ ಬಿಡಿ ಎಂದು ಆಗ್ರಹಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಕೋವಿಡ್-19 ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್ ನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ.

ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರಕ್ಕೆ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊರೋನಾ ವೈರಸ್ ನಂತರ ಎದುರಾದ ಲಾಕ್‍ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಕೆಟ್ಟ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಕಿಡಿಕಾರಿದ್ದಾರೆ.

ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ ಇಲ್ಲ ಆನ್ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸರಿಯಲ್ಲ ಎಂದಿದ್ದಾರೆ.

English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...