Mon,May20,2024
ಕನ್ನಡ / English

ನನ್ನ ಹೇಳಿಕೆಯನ್ನು‌ ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ : ಸಿದ್ದರಾಮಯ್ಯ | Janata news

12 Aug 2020
808

ಬೆಂಗಳೂರು : ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು‌ ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ, ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?, ಎಂದು ಪ್ರಶ್ನಿಸಿ ಅವರು ಟ್ವೀಟ್ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಕುರಿತಾದ ಫೇಸ್ಬುಕ್ ಪೋಸ್ಟ್ ವಿರೋಧಿಸಿ ಕಿಡಿಗೇಡಿಗಳು ನಿನ್ನೆ ಮಂಗಳವಾರ ರಾತ್ರಿ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಶಾಸಕರ ಮನೆ ಹಾಗೂ ಪೋಲಿಸ್ ಠಾಣಾ ಮೇಲೆ ಹಲ್ಲೆ ನಡೆಸಿ ಗಲಭೆ ಎಬ್ಬಿಸಿದ್ದರು. ಈ ಕುರಿತು ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ.
ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ.
ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ, ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

English summary :Few people are trying to portray my statement as anti-hindu : Siddaramayya

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...