Sun,May19,2024
ಕನ್ನಡ / English

ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿಧಾಯ ಹೇಳಿದ ಧೋನಿ | Janata news

15 Aug 2020
1077

ನವದೆಹಲಿ : ಭಾರತದ ಕ್ರಿಕೆಟರಂಗ ಕಂಡ ಅತಿದೊಡ್ಡ ಕ್ರೀಡಾಪಟುಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಅವರು ಇಂದು ಶನಿವಾರ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಮರಳುವ ಅಭಿಮಾನಿಗಳ ಆಸೆಗೆ ತೆರೆ ಎಳೆದಿದ್ದಾರೆ. ನಿಗದಿತ ಓವರ್‌ಗಳ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಅವರ ನಿರ್ಧಾರವು ಸುಮಾರು 16 ವರ್ಷಗಳ ಅವರ ಸುವರ್ಣ ಆಟವನ್ನು ಕೊನೆಗೊಳಿಸಿದೆ.

ಧೋನಿ ತಮ್ಮ ನಿರ್ಧಾರ ಪ್ರಕಟಿಸುತ್ತಿದ್ದಂತೆ ಶುಭಾಶಯದ ಮಹಾಪೂರವೇ ಹರಿದುಬರುತ್ತಿವೆ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಬಗ್ಗೆ ಮಾತಾಡಿ, ಅದು ಒಂದು ಯುಗದ ಅಂತ್ಯ. ಅವರು(ಎಂ.ಎಸ್. ಧೋನಿ) ದೇಶ ಮತ್ತು ವಿಶ್ವ ಕ್ರಿಕೆಟ್‌ಗೆ ಅಂತಹ ಆಟಗಾರರಾಗಿದ್ದಾರೆ. ಅವರ ನಾಯಕತ್ವದ ಗುಣಗಳು ಅದ್ಭುತ ಆಗಿವೆ, ಇದು ಹೊಂದಿಸಲು ಕಷ್ಟವಾಗುತ್ತದೆ, ವಿಶೇಷವಾಗಿ ಕಡಿಮೆ ಓವರ್ ಗಳ ಆಟಗಳಲ್ಲಿ, ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಐಸಿಸಿ ಏಕದಿನ ವಿಶ್ವಕಪ್ ನಂತರ ಮಾಜಿ ನಾಯಕ ಆಟದಿಂದ ವಿರಾಮ ತೆಗೆದುಕೊಂಡ ನಂತರ ಮತ್ತು ಭಾರತೀಯ ಸೇನೆಯ ರೆಜಿಮೆಂಟ್ ಅನ್ನು ಅಲ್ಪಾವಧಿಗೆ ಸೇರಿಕೊಂಡ ದೋನಿ ಕುರಿತು ಉಹಾಪೋಹಗಳು ತೀವ್ರಗೊಂಡಿದ್ದವು. ಕ್ಯಾಪ್ಟನ್ ಕೂಲ್ ಎಂದೇ ಹೆಸರುವಾಸಿಯಾಗಿದ್ದ ಧೋನಿ ತಂಡಕ್ಕೆ ಮರಳುವ ಕುರಿತು ನಿರೀಕ್ಷೆ ಹೆಚ್ಚುತ್ತಿರುವ ಬೆನ್ನಲ್ಲೇ ಧೋನಿ ತಮ್ಮ ನಿವೃತ್ತಿ ಘೋಷಿಸಿದ್ದಾರೆ.

ಧೋನಿ 2014ರ ಡಿಸೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ಹೊರಬಂದಿದ್ದರು ಮತ್ತು ಸ್ಫೋಟಕ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್ ಯಾವಾಗ ತನ್ನ ಅಂತರರಾಷ್ಟ್ರೀಯ ಕ್ರಿಕೆಟ್‌ನ ಸೀಮಿತ ಓವರ್‌ಗಳ ಆಟವನ್ನು ಸ್ಥಗಿತಗೊಳಿಸುತ್ತಾರೆ ಎಂಬ ಬಗ್ಗೆ ತೀವ್ರ ಊಹಾಪೋಹಗಳು ಕೇಳಿಬಂದವು.

English summary :Dhoni says good bye to international cricket

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...