Thu,May09,2024
ಕನ್ನಡ / English

ಕಿಸಾನ್ ಸಮ್ಮಾನ್‌ ಯೋಜನೆಯ 1 ಸಾವಿರ ಕೋಟಿ‌.ರೂ. ಬಿಡುಗಡೆ : ಸಚಿವ ಬಿ.ಸಿ.ಪಾಟೀಲ್ | Janata news

16 Aug 2020
1737

ಬೆಂಗಳೂರು : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಯಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತರು ತಮ್ಮ ಖಾತೆಯನ್ನು ಪರಿಶೀಲಿಸ ಬೇಕೆಂದು ಮನವಿ ಮಾಡಿದ್ದಾರೆ.

2019-20ನೇ ಸಾಲಿನ ಬೆಳೆ ವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದಾಗಲೀ ಚಿಂತಿಸುವ ಅವಶ್ಯಕತೆಯಿಲ್ಲ. ಸರ್ಕಾರ ಮತ್ತು ಇಲಾಖೆ ಎಂದಿಗೂ ರೈತರೊಂದಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಯೂರಿಯ ಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಕಳೆದ ಸಾಲಿಗಿಂತ ಈ ವರ್ಷ ಶೇ. 25 ರಷ್ಟು ಹೆಚ್ಚಿನದಾಗಿ ಬಿತ್ತನೆಯಾಗಿದೆ. ಈ ವರ್ಷ 65 ಸಾವಿರ ಮೆಟ್ರಿಕ್ ಟನ್ ಯೂರಿಯಾ ಹೆಚ್ಚಿನದಾಗಿ ಪೂರೈಕೆಯಾಗುತ್ತಿದ್ದು ಈ ವಾರ 37 ಸಾವಿರ ಟನ್ ಯೂರಿಯಾ ಸರಬರಾಜಾಗುತ್ತಿದೆ.

ಯೂರಿಯಾವನ್ನು ರೈತರು ಭೂಮಿಗೆ ಎಷ್ಟು ಅಗತ್ಯವೋ ಅಷ್ಟು ಪ್ರಮಾಣದಲ್ಲಿ ಮಾತ್ರ ಬಳಸಬೇಕು.ಯಾವುದೇ ರಾಸಾಯನಿಕ ಔಷಧಿಯಾಗಲೀ ರಸಗೊಬ್ಬರವನ್ನಾಗಲೀ ಅಗತ್ಯಕ್ಕೆ ಅವಶ್ಯಕತೆಗೆ ಮೀರಿ ಬಳಸಬಾರದು. ಹೀಗೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಬಳಸಿದಲ್ಲಿ ಭೂಮಿಯ ಫಲವತ್ತತೆ‌ ಕ್ಷೀಣಿಸುವ ಸಾಧ್ಯತೆಯೂ ಇದೆ ಎಂದರು.

English summary :BC Patil

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...