Sat,May04,2024
ಕನ್ನಡ / English

ಇಎಸ್‌ಡಿಎಂ ಕ್ಷೇತ್ರದಲ್ಲಿ ಕೈಗಾರಿಕೆ ಸ್ಥಾಪನೆಗೆ ಖರೀದಿಸುವ ಭೂಮಿಗೆ ಶೇ.25ರಷ್ಟು ನೇರ ಸಬ್ಸಿಡಿ:‌ ಡಾ.ಅಶ್ವತ್ಥನಾರಾಯಣ | Janata news

19 Aug 2020
866

ಬೆಂಗಳೂರು : ಕೋವಿಡ್-‌19 ನಂತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಉತ್ಪಾದನಾ (ಇಎಸ್‌ಡಿಎಂ) ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಈ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಖರೀದಿಸಲಾಗುವ ಭೂಮಿಗೆ ಶೇ 25ರಷ್ಟು ನೇರ ಸಬ್ಸಿಡಿ ನೀಡುವುದೂ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ, ಎಲೆಕ್ಟ್ರಾನಿಕ್ಸ್, ಐಟಿ- ಬಿಟಿ ಸಚಿವರೂ ಆಗಿರುವ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಭಾರತೀಯ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್ ಸಂಘ (ಐಇಎಸ್‌ಎ) ಬುಧವಾರ ಹಮ್ಮಿಕೊಂಡಿದ್ದ ವಿಷನ್‌ ಶೃಂಗಸಭೆ- 2020 ಅನ್ನು ಉದ್ದೇಶಿಸಿ ಆನ್‌ಲೈನ್‌ನಲ್ಲಿ ಮುಖ್ಯ ಭಾಷಣ ಮಾಡಿದ ಎಲೆಕ್ಟ್ರಾನಿಕ್ಸ್, ಐಟಿ- ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ, ಇಡೀ ದೇಶದಲ್ಲಿ ಇಂಥ ಕ್ರಮ ಕೈಗೊಂಡಿರುವ ಏಕೈಕ ಹಾಗೂ ಮೊದಲ ರಾಜ್ಯ ಕರ್ನಾಟಕವಾಗಿದೆ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಹಾಗೂ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿ ಮಾಡಲು ಇಂಥ ದಿಟ್ಟಹೆಜ್ಜೆ ಇಡಲಾಗಿದೆ ಎಂದರು.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಖರೀದಿಸುವ ಜಮೀನುಗಳಿಗೆ ಈ ರಿಯಾಯಿತಿ ಅನ್ವಯ ಆಗುವುದಿಲ್ಲ. ಉಳಿದ ಯಾವುದೇ ಜಿಲ್ಲೆಗಳಲ್ಲಿ 50 ಎಕರೆಯವರೆಗೆ ಭೂಮಿ ಖರೀದಿ ಮಾಡಿ ಕೈಗಾರಿಕೆ ಸ್ಥಾಪಿಸಿದರೂ ಈ ಸೌಲಭ್ಯ ದೊರೆಯಲಿದೆ. ಕೆಐಎಡಿಬಿ/ಕೆಎಸ್‌ಎಸ್‌ಐಡಿಸಿ ಯಿಂದ ಖರೀದಿಸಿದ ಭೂಮಿಯ ಮಾರ್ಗದರ್ಶಿ ದರ ಅಥವಾ ಭೂಮಿಯ ಖರೀದಿ ದರದ ಶೇ.25ರಷ್ಟು ರಿಯಾಯಿತಿ ಸಿಗಲಿದೆ ಎಂದು ಡಿಸಿಎಂ ವಿವರಿಸಿದರು.

ಇದಲ್ಲದೆ, ಕೈಗಾರಿಕಾ ಘಟಕ ಸ್ಥಾಪನೆ ಮತ್ತು ಯಂತ್ರಗಳ ಖರೀದಿಗೆ ಹೂಡಿಕೆ ಮಾಡುವ ಒಟ್ಟು ಹಣದಲ್ಲಿ ಶೇ 20ರಷ್ಟು ರಿಯಾಯಿತಿ ನೀಡುವುದಾಗಿಯೂ ಅವರು ಘೋಷಿಸಿದರು.

ಖರೀದಿ ಮಾಡಲಾದ ಭೂಮಿಯ ನೋಂದಣಿಗೆ ಖರ್ಚು ಮಾಡಿದ ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನೂ ಸರ್ಕಾರವೇ ಪೂರ್ಣ ಮರು ಪಾವತಿಸಲಿದೆ. ಭೂ ಪರಿವರ್ತನೆಗೆ ಖರ್ಚು ಮಾಡಿದ ಶುಲ್ಕವನ್ನೂ ಮರುಪಾವತಿ ಮಾಡಲಾಗುವುದು.

ಐದು ವರ್ಷಗಳ ಕಾಲ ಪ್ರತಿ ಯೂನಿಟ್‌ಗೆ ಒಂದು ರೂಪಾಯಿ ಸಬ್ಸಿಡಿ ನೀಡಲಾಗುವುದು. ಜತೆಗೆ ಬಳಕೆ ಮಾಡುವ ವಿದ್ಯುತ್‌ ಮೇಲಿನ ತೆರಿಗೆಯನ್ನು ಐದು ವರ್ಷಗಳವರೆಗೆ ಸಂಪೂರ್ಣ ರಿಯಾಯಿತಿ ಕೊಡಲಾಗುವುದು ಹಾಗೂ ಒಟ್ಟಾರೆ ವಹಿವಾಟಿನ ಮೇಲೆ ಶೇ 1ರಷ್ಟು ರಿಯಾಯಿತಿ ನೀಡಲಾಗುವುದು ಎಂದೂ ಅಶ್ವತ್ಥನಾರಾಯಣ ವಿವರಿಸಿದರು.

ಈ ಎಲ್ಲ ಪ್ರಸ್ತಾವನೆಗಳಿಗೆ ಹಣಕಾಸು ಇಲಾಖೆ ಈಗಾಗಲೇ ಒಪ್ಪಿಗೆ ನೀಡಿದೆ. ಗುರುವಾರ (ಆ. 20) ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಎಲ್ಲದಕ್ಕೂ ಅನುಮೋದನೆ ಪಡೆಯಲಾಗುವುದು ಎಂದು ಹೇಳಿದರು.

English summary :Ashwath Narayan

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...