Sun,May19,2024
ಕನ್ನಡ / English

ಸಚಿವ ಸಿಟಿ ರವಿ ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು: ಎಚ್‍ಡಿಕೆ | Janata news

01 Sep 2020
954

ಬೆಂಗಳೂರು : ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮಾದಕ ದ್ರವ್ಯ (ಡ್ರಗ್ಸ್) ಮಾಫಿಯಾದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಪತನವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ತೀವ್ರ ವಾಗ್ದಾಳಿ ನಡೆಸಿದ್ದರು.

ಹಾಗಾದರೆ ನೀವು ಅಷ್ಟು ದುರ್ಬಲ ಆಗಿದ್ದರೇ? ಅಥವಾ ನಿಮಗೆ ಡ್ರಗ್ಸ್ ಮಾಫಿಯಾದವರ ಒತ್ತಡವಿತ್ತೇ? ಅವರೊಂದಿಗೆ ನಿಮ್ಮ ಆಂತರಿಕ ಬಾಂಧವ್ಯ ಇತ್ತೇ? ಎಂದು ಕೇಳಿದ ಸಚಿವ ಸಿ.ಟಿ.ರವಿ, ನೀವು ಮುಖ್ಯಮಂತ್ರಿ ಆಗಿದ್ದವರು ಹೀಗೆಲ್ಲಾ ಮಾತಾಡಿ ನಗೆಪಾಟಲಿಗೆ ಈಡಾಗಬೇಡಿ ಲೇವಡಿ ಮಾಡಿದ್ದರು.

ಸಿಟಿ ರವಿ ಅವರ ‘ಮತ್ತಿನ’ ಆರೋಪಕ್ಕೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಎಚ್‍ಡಿಕೆ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದರು ಕಿಡಿಕಾರಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು ಎಂದು ಆರೋಪಿಸಿದ್ದಾರೆ.

ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು. ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ ಎಂದು ಮತ್ತೆ ತಮ್ಮ ಆರೋಪವನ್ನು ಪುನರುಚ್ಚರಿಸಿದರು.

ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ. ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ ಎಂದಿದ್ದಾರೆ.

ಖಜಾನೆಗೆ 25 ಸಾವಿರ ಕೋಟಿ ರೂ.ಹಣವನ್ನು ಸಂಗ್ರಹಿಸಿ ರೈತರ ಸಾಲಮನ್ನಾ ಮಾಡಿದ ಮುಖ್ಯಮಂತ್ರಿ ನಾನು. ಹೀಗಾಗಿ ಲೂಟಿ ಮಾಡಿದವರು ಅಧಿಕಾರದ ಅಮಲಿನಲ್ಲಿ ತೇಲಾಡುವಾಗ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ಕೇಳಿಸಿಕೊಳ್ಳಬೇಕಾಗಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ. ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ. ಅದು ಬಿಟ್ಟು ಬಾಯಿ ಚಪಲಕ್ಕೆ ಮಾತನಾಡುವ ಅಧಿಕಾರದ ಅಮಲು ಬಹಳ ಕಾಲ ಉಳಿಯುವುದಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...