Sun,May19,2024
ಕನ್ನಡ / English

ನಾನು ತಪ್ಪು ಮಾಡಿದ್ರೆ ,ನಾನು ಆತ್ಮಹತ್ಯೆಗೂ ಸಿದ್ಧ : ಸಚಿವ ಸೋಮಣ್ಣ ಶಾಕಿಂಗ್ ಹೇಳಿಕೆ..! | Janata news

13 Sep 2020
661

ಬೆಂಗಳೂರು : ಸಣ್ಣದಾಗಿ ನಡೆದುಕೊಂಡು, ಯಾರ ಬಗ್ಗೆಯಾದರೂ ಅಪಚಾರ ಮಾಡಿದ್ದರೆ ನಾನು ನೇಣು ಹಾಕಿಕೊಳ್ಳೋಕೆ ತಯಾರಿದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಹಾಸನದಲ್ಲಿ ಪಿಡಿಒಗಳಿಗೆ ಸಂಬಂಧಿಸಿದಂತೆ ಸೋಮಣ್ಣ ಮಾಡಿದ ಆರೋಪ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸೋಮಣ್ಣ ಅವರು ಈ ಸ್ಪಷ್ಟನೆ ನೀಡಿದರು.

ಬಡವರಿಗಾಗಿ ಶಾಸಕರು ನೀಡಿರುವ ಸಲಹೆಯನ್ನು ಸ್ವೀಕರಿಸಬೇಕು. ಸಲಹೆಗಳನ್ನು ನಾನು ಕಾರ್ಯ ರೂಪಕ್ಕೆ ತರಬೇಕು. ಇಲ್ಲವೆಂದರೆ ನಾನು ಕೆಲಸಕ್ಕೆ ಬಾರದ ವ್ಯಕ್ತಿಯಾಗಿ ಬಿಡುತ್ತೇನೆ ಎಂದರು. ಕೆಲವು ಪಿಡಿಒಗಳು ರಾಕ್ಷಸ ಪ್ರವೃತ್ತಿ ಉಳ್ಳವರು ಎಂದು ಹೇಳಿರುವ ಹೇಳಿಕೆಗೆ ಈಗಲೂ ಬದ್ಧ.

ಪಿಡಿಓಗಳು ಮಾಡಿರುವ ತಪ್ಪುಗಳಿವು. ಪಿಡಿಓಗಳು ಹೇಳಿದ್ದು ಎಲ್ಲವೂ ಸರಿ ಇರೋದಿಲ್ಲ. ಕೆಲವು ಪಿಡಿಓಗಳು ರಾಕ್ಷಸ ಪ್ರವೃತ್ತಿಯವರು ಇರ್ತಾರೆ ಎಂದಿದ್ದೇನೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅದರಲ್ಲಿ ಏನ್ ತಪ್ಪಿದೆ ಎಂದು ಸಿಎಂ ಕೇಳಿದ್ರು. ಪಿಡಿಓಗಳು ಎಲ್ಲರನ್ನೂ ರಾಕ್ಷಸರು ಅಂತ ಹೇಳಿಲ್ಲ. ಯಾವ ಪಿಡಿಒಗಳು ಸರಿಯಾಗಿ ಕೆಲಸ ಮಾಡುವುದಿಲ್ಲವೋ ಅವರನ್ನು ಕುರಿತು ಹೇಳಿದ್ದೇನೆ.

ಕೆಲವು ಪಿಡಿಓಗಳು ಪ್ರತಿಭಟನೆ ಮಾಡ್ತಾರೋ ಮಾಡಿಕೊಳ್ಳಲಿ, ನನಗೆ ತೊಂದ್ರೆ ಇಲ್ಲ. ಎಲ್ಲವೂ ಸರಿ ಇರಬೇಕು ಅನ್ನೋದು ನನ್ನ ಉದ್ದೇಶ. ದನದ ಕೊಟ್ಟಿಗೆ ಕಟ್ಟಿಸೋಕೆ, ಮತ್ತೇನೊ ಮಾಡೋಕೆ ಹಣ ಕೊಟ್ರೆ ಹೇಗೆ?. ನನಗೆ ಅರ್ಹ ಫಲಾನುಭವಿಗಳಿಗೆ ಮನೆ ಸಿಗಬೇಕು ಅಷ್ಟೇ. ನ್ಯೂನತೆಗಳು ಸರಿಯಾಗಬೇಕು.

ಹೇಳಿಕೆಯಿಂದ ಗೌರವದಿಂದ ಕೆಲಸ ಮಾಡುವ ಪಿಡಿಒಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು. ಬಡವರ ಮನೆಗಳ ಹಂಚಿಕೆ ವಿಚಾರದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಅಕ್ರಮವಾಗಿದೆ ಎಂಬುದರ ಪುಸ್ತಕ ಸಿದ್ಧಪಡಿಸಲಾಗುತ್ತಿದೆ ಎಂದು ಸೋಮಣ್ಣ ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ವಿವಿಧ ಇಲಾಖೆಗಳ ಮೇಲೆ ಅವಲಂಬಿತವಾಗಿ ಕೆಲಸ ಮಾಡಬೇಕಾಗಿದೆ. ನಾನು ಮನೆ ಹಂಚಿಕೆಗಳ ವಿಚಾರದಲ್ಲಿ ತಪ್ಪು ಮಾಡಬೇಡಿ ಎಂದಷ್ಟೇ ಹೇಳಿದ್ದೇನೆ ಎಂದರು. 5.40 ಲಕ್ಷ ಮನೆಗಳನ್ನು ನೀಡುತ್ತಿದ್ದೇವೆ. ಈ ಕೆಲಸ ಪಿಡಿಒಗಳು ಮಾಡಬೇಕಿದೆ. ಬಹಳಷ್ಟು ಮಂದಿ ಪಿಡಿಒಗಳಲ್ಲಿ ಪಾರದರ್ಶಕತೆ ಇರುವುದಿಲ್ಲ. ಹೀಗಾಗಿ ಆ ಹೇಳಿಕೆಯನ್ನು ನೀಡಿದ್ದೇ ಹೊರತು ಎಲ್ಲರನ್ನು ಕುರಿತು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...