Sat,May18,2024
ಕನ್ನಡ / English

ಹಿಂದಿ ದಿವಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ, ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು: ಎಚ್ ಡಿ ಕುಮಾರಸ್ವಾಮಿ | Janata news

14 Sep 2020
948

ಬೆಂಗಳೂರು : ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.

ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು.

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು.

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ.

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‌ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು.

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು.

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

English summary :HD Kumaraswamy

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...