Sun,May19,2024
ಕನ್ನಡ / English

73ನೇ ಕಲ್ಯಾಣ ಕರ್ನಾಟಕ ಉತ್ಸವ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಯಡಿಯೂರಪ್ಪ ಚಾಲನೆ! | Janata news

17 Sep 2020
774

ಬೆಂಗಳೂರು : ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.

ಉತ್ಸವದ ಅಂಗವಾಗಿ ನಗರದ ಹೊರವಲಯದ ಶ್ರೀನಿವಾಸ ಸರಡಗಿ ಗ್ರಾಮದ ಬಳಿಯಿರುವ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಹಾಗೂ ಡಿಸಿಎಂ ಗೋವಿಂದ ಕಾರಜೋಳಗೆ ಸ್ಥಳೀಯ ಬಿಜೆಪಿ ಮುಖಂಡರು ಸ್ವಾಗತ ಕೋರಿದರು.

ನಂತರ ರಸ್ತೆ ಮಾರ್ಗವಾಗಿ ಬಂದ ಸಿಎಂ ನಗರದ ಸರ್ದಾರ್ ವಲ್ಲಭಭಾಯ್​ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ರು. ನಂತರ ಪೊಲೀಸ್​ ಮೈದಾನಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ರು.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ‌.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ, ಡಾ. ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಸದಸ್ಯ ಬಿ.ಜಿ. ಪಾಟೀಲ್ ಉಪಸ್ಥಿತರಿದ್ದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೂಲಕ ಈ ಭಾಗದ 6 ಜಿಲ್ಲೆಗಳನ್ನು ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದೆಯೋ ಅದಕ್ಕೆ ವಿಶೇಷ ಒತ್ತು ನೀಡಲಾಗುವುದು. ಬಜೆಟ್‍ನಲ್ಲಿ ಈ ಭಾಗಕ್ಕೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದೇನೆ. ಕಾಲ ಮಿತಿಯೊಳಗೆ ಇವುಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.

ರಾಜ್ಯದ ಯಾವುದೇ ಭಾಗವು ಅಭಿವೃದ್ಧಿಯಲ್ಲಿ ಹಿಂದುಳಿದಿರಬಾರದು. ಸರ್ಕಾರ ಯಾವುದೇ ಪ್ರದೇಶವನ್ನು ತಾರತಮ್ಯ ಮಾಡದೆ ಸಮಗ್ರ ಕರ್ನಾಟಕ ಅಭಿವೃದ್ಧಿಯತ್ತ ಗಮನಹರಿಸಿದೆ. ಕೆಲವೇ ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಚಿತ್ರಣವೇ ಬದಲಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜಯದೇವ ಹೃದ್ರೋಗ ಸಂಸ್ಥೆಯಿಂದ ಇಲ್ಲಿ 7.15 ಎಕರೆ ಪ್ರದೇಶದಲ್ಲಿ ಸುಮಾರು 350 ಕೋಟಿ ರೂ. ವೆಚ್ಚದ 300 ಹಾಸಿಗೆ ಸಾಮಥ್ರ್ಯವುಳ್ಳ ಆಸ್ಪತ್ರೆಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಹೃದ್ರೋಗ ಕಾಯಿಲೆಗಳಿಗೆ ದೂರದ ಬೆಂಗಳೂರಿಗೆ ಬರುವುದು ತಪ್ಪತ್ತದೆ ಎಂದು ಅಭಿಪ್ರಾಯಪಟ್ಟರು.

ಕಲಬುರಗಿಯಲ್ಲಿ ಈಗಾಗಲೇ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸುತ್ತಿದ್ದು, ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ. ಜೊತೆಗೆ ನೀರಾವರಿ, ಕೃಷಿ, ಆರೋಗ್ಯ ಸೇರಿದಂತೆ ಮತ್ತಿತರ ಯೋಜನೆಗಳಿಗೂ ಚಾಲನೆ ಕೊಟ್ಟಿದ್ದೇವೆ ಎಂದು ಹೇಳಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲೇ ಬಸವ ಕಲ್ಯಾಣ ಪ್ರಾಧಿಕಾರದ ಮೂಲಕ ಅನುಭವ ಮಂಟಪ ಕೆಲಸಕ್ಕೆ ಶೀಘ್ರದಲ್ಲೇ ಚಾಲನೆ ಕೊಡಲಾಗುವುದು.

ಮೂರು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕಲಬುರಗಿ, ಬೀದರ್ ಜಿಲ್ಲೆಗೆ ಉಪಯೋಗವಾಗುವ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಮತ್ತು ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು. ಇದರಿಂದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ವ್ಯಾಪ್ತಿಗೊಳಪಡುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಅತಿ ಹಿಂದುಳಿದ ಪ್ರದೇಶಗಳಾಗಿದ್ದು, ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಾಧ್ಯವಾದ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.

English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...