Fri,Apr26,2024
ಕನ್ನಡ / English

ರಾಯಚೂರು ಐಐಐಟಿಗೆ ಗ್ರೀನ್ ಸಿಗ್ನಲ್: ಡಿಸಿಎಂ ಲಕ್ಷ್ಮಣ್ ಸವದಿ ಅಭಿನಂದನೆ! | Janata news

23 Sep 2020
1147

ರಾಯಚೂರು : ರಾಯಚೂರು ಸೇರಿದಂತೆ ದೇಶದ ಐದು ಕಡೆಗಳಲ್ಲಿ ಕಾರ್ಯ ನಿರ್ವಹಿಸಲಿರುವ ಇಂಡಿಯನ್ ಇನಿಸ್ಟಿಟ್ಯೂಟ್ ಆಫ್ ಇನ್‍ಫಾರ್ಮೇಷನ್ ಟೆಕ್ನಾಲಜಿ (ಐಐಐಟಿ)ಗಳಿಗೆ ರಾಷ್ಟ್ರೀಯ ಸಂಸ್ಥೆಗಳ ಸ್ಥಾನಮಾನ ನೀಡುವ ವಿಧೇಯಕವನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿರುವುದರಿಂದ ರಾಯಚೂರಿನ ಐಐಐಟಿ ಸಂಸ್ಥೆಯ ಚಟುವಟಿಕೆಗಳಿಗೆ ಹೆಚ್ಚಿನ ಚಾಲನೆ ಸಿಕ್ಕಿದಂತಾಗಿರುವುದು ಅತ್ಯಂತ ಸಂತೋಷದ ಸಂಗತಿ. ಈ ಬಗ್ಗೆ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂಬುದಾಗಿ ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ಐಐಐಟಿಯನ್ನು ಅತೀ ಶೀಘ್ರವಾಗಿ ಕಾರ್ಯಾರಂಭಿಸಬೇಕೆಂಬುದು ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ಉದ್ದೇಶವಾಗಿತ್ತು.

ಈ ನಿಟ್ಟಿನಲ್ಲಿ ಕಳೆದ ಮಾರ್ಚ್‍ನಲ್ಲಿಯೇ ಲೋಕಸಭೆಯಲ್ಲಿ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಗಿದ್ದು, ಈಗ ರಾಜ್ಯಸಭೆಯಲ್ಲೂ ಈ ವಿಧೇಯಕವನ್ನು ಅಂಗೀಕರಿಸಿರುವುದರಿಂದ ರಾಯಚೂರಿನ ಐಐಐಟಿಯು ಸಂಪೂರ್ಣ ಸಾಕಾರಗೊಂಡಂತಾಗಿದೆ ಎಂದರು.

ಈ ಐಐಐಟಿ ಗೆ ಹಸಿರು ನಿಶಾನೆ ಸಿಕ್ಕಿರುವುದರಿಂದ ಕರ್ನಾಟಕದ ಶೈಕ್ಷಣಿಕ ಕ್ಷೇತ್ರವು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಗೌರವಕ್ಕೆ ಪಾತ್ರವಾಗಿದೆ.

ಸೂರತ್(ಗುಜರಾತ್), ಭೋಪಾಲ್(ಮಧ್ಯಪ್ರದೇಶ), ಭಾಗಲ್ಪುರ್ (ಬಿಹಾರ), ಅಗರ್ತಲಾ (ತ್ರಿಪುರ) ಹಾಗೂ ರಾಯಚೂರು (ಕರ್ನಾಟಕ) ಈ ನಗರಗಳಲ್ಲಿ ಹೊಸದಾಗಿ ಐಐಐಟಿಗಳನ್ನು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಲಾಗಿದೆ.

ಕಳೆದ ಸಂಸತ್ ಅಧಿವೇಶನದಲ್ಲಿ ಮಾರ್ಚ್ 20ರಂದು ಲೋಕಸಭೆಯಲ್ಲಿ ಈ ವಿಧೇಯಕ್ಕೆ ಅಂಗೀಕಾರ ಲಭಿಸಿತ್ತು. ಈ ಐದು ಸಂಸ್ಥೆಗಳನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಐಐಐಟಿಗಳೆಂದು ಘೋಷಿಸಲಾಗಿದ್ದು, ಇವುಗಳು ಡಿಪ್ರೋಮಾ, ಡಿಗ್ರಿ, ಸ್ನಾತಕೋತ್ತರ ಪದವಿ, ಪಿಎಚ್‍ಡಿ ಇತ್ಯಾದಿ ನೀಡಲು ಕಾನೂನು ಬದ್ಧ ಹಕ್ಕು ಹೊಂದಲಿವೆ ಎಂದು ಶಿಕ್ಷಣ ಸಚಿವ ನಿಶಾಂಕ್ ತಿಳಿಸಿದರು.

English summary :Rayachuru IIT

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...