ಕೆಎಸಎಪಿಎಸ : ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿ | Janata news
ಕೋಲಾರ : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಅಡಿಯಲ್ಲಿ 2019-20 ಸಾಲಿಗೆ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿ ಮತ್ತು ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಲ್ಲಿ ಕಾರ್ಯಕ್ರಮ ಸಹಾಯಕರ ಹುದ್ದೆಗೆ ನೇಮಕಾತಿ ನಡೆಯಲಿದ್ದು ಆಸಕ್ತರು ಜು.18 ರಂದು ಬೆಳಿಗ್ಗೆ 10 ಗಂಟೆಯ ಒಳಗಾಗಿ ತಮ್ಮ ಮೂಲ ದಾಖಲೆಗಳು ಹಾಗೂ 1 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಹಾಜರಾಗಬೇಕು. ಈ ಕುರಿತು ಹೆಚ್ಚಿನ ಮಾಹಿತಿಯನ್ನು 9449843233 ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
English summary :KSAPS : Various post selection on contract basis